Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಲೋಟನು ಚೋಗರಿನಲ್ಲಿ ಮನೆ ಮಾಡುವುದಕ್ಕೆ ಅಂಜಿದನು. ಈ ಕಾರಣ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕರೆದುಕೊಂಡು ಗುಡ್ಡಗಾಡನ್ನು ಹತ್ತಿ ಅಲ್ಲಿದ್ದ ಒಂದು ಗವಿಯಲ್ಲಿ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಲೋಟನು ಚೋಗರಿನಲ್ಲಿರುವದಕ್ಕೆ ಅಂಜಿ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕರಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣುಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:30
10 ತಿಳಿವುಗಳ ಹೋಲಿಕೆ  

ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಜನರು ಅರಚಿಕೊಳ್ಳುತ್ತಾರೆ, ಚೋಯರಿನಿಂದ ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.


ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ,


ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.


ಅಬ್ರಾಮನು, ಸೊದೋಮಿನ ಅರಸನಿಗೆ,


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು