Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ಗರ್ಭಿಣಿಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದಲೇ ಗರ್ಭಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಈ ಪ್ರಕಾರ ಲೋಟನ ಇಬ್ಬರು ಪುತ್ರಿಯರು ತಮ್ಮ ತಂದೆಯಿಂದ ಗರ್ಭಿಣಿಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:36
9 ತಿಳಿವುಗಳ ಹೋಲಿಕೆ  

‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.


ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.


ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.


ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು