ಆದಿಕಾಂಡ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನಗೆ ಪುರುಷರನ್ನರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸೇನು; ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು ಎಂದು ಹೇಳಲು ಅವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೋಡಿ! ನನಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಅವರು ಹಿಂದೆಂದೂ ಗಂಡಸರೊಡನೆ ಮಲಗಿದವರಲ್ಲ. ನೀವು ಅವರಿಗೆ ಏನುಬೇಕಾದರೂ ಮಾಡಿ, ಆದರೆ ದಯವಿಟ್ಟು ಈ ಪುರುಷರಿಗೆ ಏನನ್ನೂ ಮಾಡಬೇಡಿ. ಇವರು ನನ್ನ ಮನೆಗೆ ಬಂದಿದ್ದಾರೆ; ಇವರನ್ನು ಕಾಪಾಡುವುದು ನನ್ನ ಕರ್ತವ್ಯ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |