ಆದಿಕಾಂಡ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್. ಅಧ್ಯಾಯವನ್ನು ನೋಡಿ |
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.