Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವದೇವರು ಆ ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರಾದ ಯೆಹೋವನು ಆ ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:15
7 ತಿಳಿವುಗಳ ಹೋಲಿಕೆ  

ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು.


ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು.


ಮನುಷ್ಯನು ಜನ ಸಮುದಾಯಕ್ಕೆ ಹೆದರಿದ್ದರಿಂದಾಗಲಿ, ಕುಲೀನರ ತಿರಸ್ಕಾರವು ನನಗೆ ಭಯ ಹುಟ್ಟಿಸಿದ್ದರಿಂದಾಗಲಿ,


ಮೂರನೆಯ ನದಿಯ ಹೆಸರು ಟೈಗ್ರೀಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.


ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು