Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:18
10 ತಿಳಿವುಗಳ ಹೋಲಿಕೆ  

ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.


ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.


ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?


ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.


ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು