ಆದಿಕಾಂಡ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಆತನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿ - ಇವುಗಳಿಗೆ ಆ ಮನುಷ್ಯನು ಏನೇನು ಹೆಸರಿಡುವನು ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. ಅಧ್ಯಾಯವನ್ನು ನೋಡಿ |