Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಆಕೆಯನ್ನು ನೋಡಿ- ಈಗ ಸರಿ; ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬೂ ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ; ಈಕೆಯು ನರನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:23
6 ತಿಳಿವುಗಳ ಹೋಲಿಕೆ  

ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,


“ನೀವು ದಯವಿಟ್ಟು ಶೆಕೆಮಿನ ಹಿರಿಯರನ್ನು ಮಾತನಾಡಿಸಿ, ‘ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳ್ವಿಕೆ ಮಾಡುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ?’ ಎಂದು ಅವರನ್ನು ಕೇಳಿ, ನಾನು ಅವರ ರಕ್ತಸಂಬಂಧಿಯಾಗಿದ್ದೇನೆ ಎಂಬುದನ್ನು ತಿಳಿಸಿರಿ” ಅಂದನು.


ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು ಲಾಬಾನನು ಅವನಿಗೆ, “ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದಿ” ಎಂದು ಹೇಳಿದನು.


ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು