ಆದಿಕಾಂಡ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ಗಿಡವಾದರೂ ಭೂವಿುಯಲ್ಲಿ ಇರಲಿಲ್ಲ, ಯಾವ ಪಲ್ಯವೂ ಹುಟ್ಟಿರಲಿಲ್ಲ. ಯಾಕಂದರೆ ಯೆಹೋವದೇವರು ಭೂವಿುಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ; ಭೂವಿುಯನ್ನು ವ್ಯವಸಾಯ ಮಾಡುವದಕ್ಕೆ ಮನುಷ್ಯನೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡಲು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |