Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ದೇವಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವದಕ್ಕೆ ಹೊರಟಾಗ ನಾನು ಆಕೆಗೆ - ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ಉಪಕಾರವಾಗಬೇಕು, ಏನಂದರೆ ನೀನು ನನ್ನನ್ನು ಅಣ್ಣನೆಂಬದಾಗಿ ಹೇಳಬೇಕೆಂದು ಬೋಧಿಸಿದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:13
10 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.


ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.


ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.


ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು