ಆದಿಕಾಂಡ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿ |