Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯನಾಗಬಾರದು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:10
17 ತಿಳಿವುಗಳ ಹೋಲಿಕೆ  

ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.


ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.


ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.


ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’


ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.


ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.


ಅಬ್ರಹಾಮನು ತನ್ನ ಮಗನನ್ನು ಕೊಲ್ಲುವುದಕ್ಕೆ, ಕೈಚಾಚಿ ಕತ್ತಿಯನ್ನು ತೆಗೆದುಕೊಂಡನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.


ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.


ಗಿಲ್ಯಾದನಿಗೆ ಹೆಂಡತಿಗೂ ಮಕ್ಕಳು ಹುಟ್ಟಿದ್ದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು