ಆದಿಕಾಂಡ 21:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು. ಅಧ್ಯಾಯವನ್ನು ನೋಡಿ |