ಆದಿಕಾಂಡ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕಲ್ಲೆಸೆಯುವಷ್ಟು ದೂರ ಹೋಗಿ ಕುಳಿತುಕೊಂಡು, “ಮಗುವು ಸಾಯುವುದನ್ನು ನೋಡಲಾರೆನು” ಎಂದು ಹೇಳಿ ಜೋರಾಗಿ ಅತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹಾಗರಳು ಸ್ವಲ್ಪ ದೂರ ನಡೆದುಹೋಗಿ ಕುಳಿತುಕೊಂಡು ತನ್ನ ಮಗನು ಸಾಯುವುದನ್ನು ನೋಡಲಾರದೆ ಅಳತೊಡಗಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು. ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.