Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹುಡುಗನ ಸಂಗಡ ದೇವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಆ ಮಗುವಿನ ಸಂಗಡವಿದ್ದ ಕಾರಣ ಆ ಮಗುವು ಬೆಳೆದು ದೊಡ್ಡವನಾದನು; ಕಾಡಿನಲ್ಲಿ ವಾಸವಾಗಿದ್ದು ಚತುರ ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:20
13 ತಿಳಿವುಗಳ ಹೋಲಿಕೆ  

ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಆ ಮನುಷ್ಯ ಕಾಡು ಕತ್ತೆಯಂತೆ ಇರುವನು. ಅವನು ಎಲ್ಲರ ಮೇಲೆ ಕೈಯೆತ್ತುವನು; ಹಾಗೆಯೇ ಅವನ ಮೇಲೆ ಎಲ್ಲರೂ ಕೈಯೆತ್ತುವರು. ತನ್ನ ಅಣ್ಣತಮ್ಮಂದಿರಿಗೆ ಎದುರಾಗಿ ವಾಸವಾಗಿರುವನು” ಎಂದು ಹೇಳಿ ಹೋದನು.


ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು.


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.


ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.


ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.


ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು


ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು