ಆದಿಕಾಂಡ 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದುದರಿಂದ ನೀನು ಈ ಸ್ಥಳದಲ್ಲಿ ನನ್ನೊಂದಿಗೆ ಒಂದು ಒಪ್ಪಂದಕ್ಕೆ ಬರಬೇಕು: ಅದೇನೆಂದರೆ - ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡಬಾರದು; ನಾನು ನಿನಗೆ ಒಳ್ಳೆಯದನ್ನೇ ಮಾಡಿದಂತೆ ನನಗೂ, ನೀನು ವಾಸಮಾಡುತ್ತಿರುವ ಈ ನಾಡಿಗೂ ಒಳ್ಳೆಯದನ್ನೇ ಮಾಡಬೇಕು. ಹೀಗೆ ಮಾಡುವುದಾಗಿ ದೇವರ ಮೇಲೆ ಪ್ರಮಾಣಮಾಡಬೇಕು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀನು ಈ ಸ್ಥಳದಲ್ಲಿ ನನ್ನೊಂದಿಗೆ [ಒಡಂಬಡಿಕೆಮಾಡಿಕೊಂಡು] ನೀನು ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡದೆ ನಾನು ನಿನಗೆ ಹಿತವನ್ನು ಮಾಡಿದಂತೆಯೇ ನನಗೂ ನೀನು ಇಳುಕೊಂಡಿರುವ ಈ ದೇಶಕ್ಕೂ ಹಿತವನ್ನು ಮಾಡುವದಾಗಿ ದೇವರ ಮೇಲೆ ಪ್ರಮಾಣಮಾಡಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು. ಅಧ್ಯಾಯವನ್ನು ನೋಡಿ |