Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ “ಇಸಾಕ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತನ್ನಿಂದ ಸಾರಳಲ್ಲಿ ಹುಟ್ಟಿದ ಆ ಮಗನಿಗೆ ಅಬ್ರಹಾಮನು ‘ಇಸಾಕ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಬ್ರಹಾಮನು ಸಾರಳಲ್ಲಿ ತನ್ನಿಂದ ಹುಟ್ಟಿದ ಮಗನಿಗೆ ಇಸಾಕ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ, ಇಸಾಕ, ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:3
11 ತಿಳಿವುಗಳ ಹೋಲಿಕೆ  

ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.


ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.


ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.


ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.


ಹೇಗೆಂದರೆ ಆತನು ಅವನನ್ನು, “ಅಬ್ರಹಾಮನೇ” ಎಂದು ಕರೆಯಲು ಅವನು, “ಇಗೋ, ಇದ್ದೇನೆ” ಎಂದನು. ಆಗ ಆತನು, “ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ಕರೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು” ಎಂದನು.


ಆದರೆ ದೇವರು ಅವನಿಗೆ, “ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನೊಂದಿಗೆ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರ್ಷ ಇದೇ ವೇಳೆಗೆ ಸಾರಳು ಅವನನ್ನು ಹೆರುವಳು” ಅಂದನು.


ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು