Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಆ ಸ್ಥಳದಲ್ಲಿ ಒಪ್ಪಂದ ಮಾಡಿಕೊಂಡಿದ್ದರಿಂದ ಆ ಬಾವಿಗೆ ಬೇರ್ಷೆಬ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:31
14 ತಿಳಿವುಗಳ ಹೋಲಿಕೆ  

ಅವನು ಆ ಬಾವಿಗೆ “ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.


ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.


ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,


ಇಸಾಕನು ಅಲ್ಲಿಂದ ಹೊರಟು ಗಟ್ಟಾ ಹತ್ತಿ ಬೇರ್ಷೆಬಕ್ಕೆ ಬಂದನು.


ಬೇರ್ಷೆಬದಲ್ಲಿ ಅವರು ಒಡಂಬಡಿಕೆಯನ್ನು ಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಧಿಪತಿಯಾದ ಫೀಕೋಲನೂ ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿ ಹೊರಟು ಹೋದರು.


ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.


ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಬೇತೇಲನ್ನು ಆಶ್ರಯಿಸಬೇಡಿರಿ; ಗಿಲ್ಗಾಲನ್ನು ಸೇರಬೇಡಿರಿ; ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಗಿಲ್ಗಾಲು ನಿಶ್ಚಯವಾಗಿ ಸೆರೆಗೆ ಹೋಗುವುದು. ಬೇತೇಲು ಬಯಲಾಗುವುದು.


ಅಲ್ಲಿಂದ ಚೀದೋನ್ ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು, ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.


ಹಚರ್‌ ಷೂವಾಲ್ ಹಾಗು ಬೇರ್ಷೆಬ ಇವುಗಳೂ ಮತ್ತು ಇವುಗಳ ಗ್ರಾಮಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು