Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಾರಳು, “ದೇವರು ನನ್ನನ್ನು ಸಂತೋಷಪಡಿಸಿ ನಗುವಂತೆ ಮಾಡಿದ್ದಾನೆ; ಇದುವರೆಗೂ ಈ ಬಗ್ಗೆ ಕೇಳಿದವರು ನನ್ನೊಡನೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಾರಳು ಇಂತೆಂದುಕೊಂಡಳು: “ತಂದಿಹನಿದೋ ಎನಗೊಂದು ‘ನಗು’ವನು ಆ ದೇವನು, ನಕ್ಕು ನಲಿವರೆನ್ನೊಡನೆ ಇದನು ಕೇಳುವವರೆಲ್ಲರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಾರಳು - ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ; ಕೇಳುವವರೆಲ್ಲರೂ ನನ್ನೊಡನೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಾರಳು, “ದೇವರು, ನನ್ನನ್ನು ನಗುವಂತೆ ಮಾಡಿದ್ದಾನೆ, ಇದನ್ನು ಕೇಳಿದ ಪ್ರತಿಯೊಬ್ಬರು ನನ್ನೊಡನೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:6
17 ತಿಳಿವುಗಳ ಹೋಲಿಕೆ  

“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.


ಅಬ್ರಹಾಮನು ಅಡ್ಡ ಬಿದ್ದು ನಕ್ಕು, “ನೂರು ವರ್ಷದವನಿಗೆ ಮಗ ಹುಟ್ಟುವುದುಂಟೇ? ತೊಂಭತ್ತು ವರ್ಷದವಳಾದ ಸಾರಳು ಹೆರಲು ಸಾಧ್ಯವೇ?” ಎಂದು ಮನಸ್ಸಿನಲ್ಲಿ ಅಂದುಕೊಂಡನು.


ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.


ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು.


ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು.


ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.


“ನಿನಗೆ ಗಂಡುಮಗು ಹುಟ್ಟಿದೆ” ಎಂಬ ಸಮಾಚಾರವನ್ನು ನನ್ನ ತಂದೆಗೆ ತಿಳಿಸಿ ಅವನಿಗೆ ಕೇವಲ ಆನಂದವನ್ನು ಉಂಟುಮಾಡಿದವನು ಶಪಿಸಲ್ಪಡಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು