Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:17
50 ತಿಳಿವುಗಳ ಹೋಲಿಕೆ  

“ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವುದು ನಿನ್ನಿಂದಾದರೆ ಲೆಕ್ಕಿಸು.” ನಂತರ ಯೆಹೋವನು ಅಬ್ರಾಮನಿಗೆ, “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂದು ಹೇಳಿದನು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವುಂಟಾಗುವುದು.


ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.


‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.


ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.


ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.


ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು,


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.


ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಅಭಿವೃದ್ಧಿಪಡಿಸುವೆನು” ಎಂದು ಹೇಳಿದನಷ್ಟೆ.


ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು.


ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.


“ಕೇವಲ ಯೆಹೋವನಿಗೇ ಆಗಲಿ” ಎಂದು ನೀವು ಗೊತ್ತು ಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಬೇಕು.


ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.


ಈಗ ಯೆಹೋವನಾದ ದೇವರೇ, ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವು ನೆರವೇರಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯವಾದ ಜನಾಂಗದವರಿಗೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ಹೀಗಿರುವುದರಿಂದ ನನ್ನ ಆಲೋಚನೆಯನ್ನು ಕೇಳು. ದಾನಿನಿಂದ ಬೇರ್ಷೆಬದ ವರೆಗೆ ವಾಸವಾಗಿರುವ ಇಸ್ರಾಯೇಲರೊಳಗಿನಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.


ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.


ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ಈ ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ನಿಮ್ಮ ಸಹೋದರರನ್ನು “ಅಮ್ಮಿ” ಎಂದು, ನಿಮ್ಮ ಸಹೋದರಿಯರನ್ನು “ರುಹಾಮ” ಎಂದು ಕರೆಯಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು