Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು ಅವನು ತನ್ನ ಸೇವಕರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂರನೆಯ ದಿನದಲ್ಲಿ ಅಬ್ರಹಾಮನು ಕಣ್ಣೆತ್ತಿ ನೋಡುವಾಗ ಆ ಸ್ಥಳವು ದೂರದಲ್ಲಿ ಕಾಣಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಆ ಸ್ಥಳವು ದೂರದಲ್ಲಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:4
19 ತಿಳಿವುಗಳ ಹೋಲಿಕೆ  

ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.


ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.


“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸ್ವಲ್ಪ ದೂರಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತು,


“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.


ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.


ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.


ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.


ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.


ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.


ಆನಂತರ ಮೋಶೆಯು ಇಸ್ರಾಯೇಲರನ್ನು ಕೆಂಪುಸಮುದ್ರದ ಮೂಲಕವಾಗಿ ನಡೆಸಿದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನಗಳು ನೀರಿಲ್ಲದೆ ಪ್ರಯಾಣ ಮಾಡಿದರು.


ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.


ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


“ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು