ಆದಿಕಾಂಡ 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡನಂತರ ಅವರಿಬ್ಬರೂ ಹೊರಟು ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಆ ಸ್ಥಳಕ್ಕೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು. ಅಧ್ಯಾಯವನ್ನು ನೋಡಿ |