Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ - ಅಪ್ಪಾ ಎಂದು ಕರೆಯಲು ಅಬ್ರಹಾಮನು - ಏನು ಮಗನೇ ಅಂದನು. ಇಸಾಕನು - ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ ಎಂದು ಕೇಳಿದ್ದಕ್ಕೆ ಅಬ್ರಹಾಮನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:7
12 ತಿಳಿವುಗಳ ಹೋಲಿಕೆ  

ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.


ಆಗ ಯೇಸು ಪೇತ್ರನಿಗೆ, “ಕತ್ತಿಯನ್ನು ಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.


ತಿರುಗಿ ಎರಡನೇ ಸಾರಿ ಹೋಗಿ, “ನನ್ನ ತಂದೆಯೇ, ನಾನು ಕುಡಿಯದ ಹೊರತು ಈ ಪಾತ್ರೆ ಬಿಟ್ಟುಹೋಗಲಾರದು ಎಂದಿದ್ದರೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.


ಆಗ ನೋಹನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿ, ಅದರ ಮೇಲೆ ಶುದ್ಧವಾದ ಪ್ರತಿ ಪಶು ಪಕ್ಷಿಗಳಿಂದ ಆಯ್ದುಕೊಂಡು ಸರ್ವಾಂಗಹೋಮ ಮಾಡಿದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.


ಅಬ್ರಹಾಮನು, “ಮಗನೇ, ಹೋಮಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದನು.


ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು