Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ನಿಮ್ಮಲ್ಲಿ ಪರದೇಶದವನೂ, ಪ್ರವಾಸಿಯೂ ಆಗಿದ್ದೇನೆ. ಈಗ ಮರಣಹೊಂದಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ಸ್ವಲ್ಪ ಭೂಮಿಯನ್ನು ನನ್ನ ಸ್ವಂತಕ್ಕೆ ಕೊಡಿ” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿಮ್ಮಲ್ಲಿ ಪರದೇಶದವನೂ ಪರವಾಸಿಯೂ ಆಗಿದ್ದೇನಷ್ಟೆ. ತೀರಿಹೋಗಿರುವ ನನ್ನ ಪತ್ನಿಯ ಸಮಾಧಿಗೋಸ್ಕರ ನಿಮ್ಮಲ್ಲಿ ನನ್ನ ಸ್ವಂತಕ್ಕೆ ಭೂವಿುಯನ್ನು ಕೊಡಬೇಕೆಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:4
21 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ನಾನು ಭೂಲೋಕದಲ್ಲಿ ಪ್ರವಾಸಿಯಾಗಿದ್ದೇನೆ, ನಿನ್ನ ಆಜ್ಞೆಗಳನ್ನು ನನಗೆ ಮರೆಮಾಡಬೇಡ.


ಈ ದೇಶದಲ್ಲಿ ಅವನಿಗೆ ಕಾಲಿಡುವಷ್ಷ್ಟು ಭೂಮಿಯನ್ನು ಸ್ವತ್ತಾಗಿ ಕೊಡದೆ ಅವನಿಗೆ ಮಕ್ಕಳೇ ಇಲ್ಲದಿರುವಾಗ ನೀನಿರುವ ದೇಶವನ್ನು ನಿನಗೂ, ನಿನ್ನ ನಂತರ ಬರುವ ನಿನ್ನ ಸಂತತಿಗೂ ಸ್ವತ್ತಾಗಿ ಕೊಡುವೆನೆಂದು ಅವನಿಗೆ ವಾಗ್ದಾನಮಾಡಿದನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.


ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.


ಯಾಕೋಬನು ಫರೋಹನಿಗೆ, “ನನ್ನ ಇಹಲೋಕ ಪ್ರಯಾಣದ ಕಾಲವು ನೂರಮೂವತ್ತು ವರ್ಷಗಳು. ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ಹಾಗೂ ದುಃಖಕರವಾಗಿಯೂ ಇತ್ತು; ಆದರೂ ನನ್ನ ಪೂರ್ವಿಕರು ಜೀವಿಸಿದಷ್ಟು ವರ್ಷಗಳು ನನಗಾಗಿಲ್ಲ” ಎಂದು ಹೇಳಿದನು.


ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.


ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಹಿತ್ತಿಯರು ಅಬ್ರಹಾಮನಿಗೆ,


ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು