Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಬ್ರಹಾಮನು ಎದ್ದು, ಹಿತ್ತಿಯರಾಗಿದ್ದ ಆ ದೇಶದವರಿಗೆ ತಲೆಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಬ್ರಹಾಮನು ಎದ್ದುನಿಂತು ಆ ಹಿತ್ತಿಯ ನಾಡಿಗರಿಗೆ ಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ದೇಶದವರಿಗೆ ಬೊಗ್ಗಿ ನಮಸ್ಕರಿಸಿ ಅವರ ಸಂಗಡ ಇನ್ನೂ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬ್ರಹಾಮನು ಎದ್ದುನಿಂತು ಅವರಿಗೆ ನಮಸ್ಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅಬ್ರಹಾಮನು ಎದ್ದು, ಆ ದೇಶದ ಜನರಾದ ಹಿತ್ತಿಯರ ಮುಂದೆ ತಲೆಬಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:7
11 ತಿಳಿವುಗಳ ಹೋಲಿಕೆ  

ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


“ಸ್ವಾಮಿ, ನಮ್ಮ ಮಾತನ್ನು ಕೇಳು. ನೀನು ನಮಗೆ ಮಹಾ ಪ್ರಭುವಾಗಿದ್ದೀಯಷ್ಟೆ. ಮರಣಹೊಂದಿರುವ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಯೊಳಗೆ ಶೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವುದಕ್ಕೆ ನಮ್ಮೊಳಗೆ ಯಾರೂ ಸ್ಮಶಾನ ಭೂಮಿಯನ್ನು ಕೊಡುವುದಕ್ಕೆ ಹಿಂದೆಗೆಯುವುದಿಲ್ಲ” ಎಂದು ಉತ್ತರ ಕೊಡಲು


ಅವನು ಅವರ ಸಂಗಡ ಪುನಃ ಮಾತನಾಡಿ, “ನಾನು ನಿಮ್ಮಲ್ಲಿ ನನ್ನ ಪತ್ನಿಯ ಶವವನ್ನು ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾಗಿದ್ದರೆ ನನಗೆ ನಿಮ್ಮಲ್ಲಿ ಒಂದು ವಿಜ್ಞಾಪನೆ ಇದೆ. ನೀವು ಚೋಹರನ ಮಗನಾದ ಎಫ್ರೋನನ ಸಂಗಡ ನನಗೋಸ್ಕರ ಮಾತನಾಡಿ,


ಎಂದು ಹೇಳಲು ಅಬ್ರಹಾಮನು ಆ ದೇಶದ ಜನರಿಗೆ ನಮಸ್ಕರಿಸಿ ಅವರೆಲ್ಲರ ಮುಂದೆ


ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು