Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀರಿನ ಬುಗ್ಗೆಯ ಬಳಿಯಲ್ಲಿ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ. ಊರಿನ ಜನರ ಪುತ್ರಿಯರು ನೀರು ಸೇದುವುದಕ್ಕೆ ಹೊರಗೆ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:13
10 ತಿಳಿವುಗಳ ಹೋಲಿಕೆ  

ನೀರಿಗೆ ಬರುವ ಯಾವ ಸ್ತ್ರೀಗೆ, ‘ನೀನು ದಯವಿಟ್ಟು, ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡಮ್ಮಾ’ ಎಂದು ನಾನು ಕೇಳುವಾಗ, ಅವಳು,


ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;


ಸೇದುವ ಬಾವಿಗಳ ಬಳಿಯಲ್ಲಿ ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.


ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.


ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.


ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು