ಆದಿಕಾಂಡ 24:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಯಾವ ಹುಡುಗಿಗೆ - ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವದಕ್ಕೆ ಕೊಡು ಎಂದು ಹೇಳುವಾಗ - ನೀನು ಕುಡಿಯಬಹುದು, ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ ಅನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇವಿುಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯವದೆ ಎಂದು ಇದರಿಂದ ನನಗೆ ಗೊತ್ತಾಗುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |