Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಲು ಚೆಲುವೆ; ಯಾವ ಪುರುಷನ ಸಂಸರ್ಗವೂ ಇಲ್ಲದ ಕನ್ನಿಕೆ, ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಸಿಕೊಂಡು ಮೇಲಕ್ಕೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ಹುಡುಗಿ ಬಹು ಸುಂದರಿಯಾಗಿಯೂ ಇನ್ನೂ ಮದುವೆಯಿಲ್ಲದ ಕನ್ನಿಕೆಯಾಗಿಯೂ ಇದ್ದಳು. ಆಕೆ ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಹುಡುಗಿಯು ನೋಡುವುದಕ್ಕೆ ಬಹು ಸುಂದರಿಯಾಗಿದ್ದಳು, ಮದುವೆಯಾಗದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಯ ಬಳಿಗೆ ಹೋಗಿ, ತನ್ನ ಕೊಡವನ್ನು ತುಂಬಿಕೊಂಡು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:16
7 ತಿಳಿವುಗಳ ಹೋಲಿಕೆ  

ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.


ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.


ಅವನು ಐಗುಪ್ತ ದೇಶದ ಹತ್ತಿರಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ, “ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ;


ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿ ಹೀನವಾಗಿದ್ದವು. ಆದರೆ ರಾಹೇಲಳು ಬಹು ಸುಂದರಿಯು ಲಾವಣ್ಯವತಿಯೂ ಆಗಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು