Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:31
11 ತಿಳಿವುಗಳ ಹೋಲಿಕೆ  

ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.


ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಇಗೋ, ಆ ಸಾವಿರದ ನೂರು ರೂಪಾಯಿಗಳು ನನ್ನ ಹತ್ತಿರ ಇವೆ; ನಾನು ತೆಗೆದುಕೊಂಡಿದ್ದೆನು” ಎಂದು ಹೇಳಿದನು. ಆಕೆಯು, “ನನ್ನ ಮಗನೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಅಂದಳು.


ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.


“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು


ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ತನ್ನ ತಂಗಿಯ ಬಳಿ ಇದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿ, ಆ ಮನುಷ್ಯನು ನನ್ನ ಸಂಗಡ ಹೇಗೆ ಮಾತನಾಡಿದನೆಂದು ರೆಬೆಕ್ಕಳು ಹೇಳಿದ ಮಾತುಗಳನ್ನು ಕೇಳಿ, ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಬಂದನು.


ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು