Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ಧನವಂತನಾದನು. ದೇವರು ಅವನಿಗೆ ಕುರಿದನ, ಬೆಳ್ಳಿಬಂಗಾರ, ದಾಸದಾಸಿ, ಒಂಟೆಗಳು ಮತ್ತು ಕತ್ತೆಗಳನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:35
20 ತಿಳಿವುಗಳ ಹೋಲಿಕೆ  

ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.


ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಅಬ್ರಹಾಮನು ತೀರಿಹೋದ ನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನ ಮೇಲೂ ಉಂಟಾಯಿತು. ಇಸಾಕನು ಬೆರ್ ಲಹೈರೋಯಿಯ ಹತ್ತಿರ ವಾಸವಾಗಿದ್ದನು.


ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು. ಅದಕ್ಕೆ ಇಹಪರಗಳಲ್ಲಿನ ಜೀವನಕ್ಕೆ ವಾಗ್ದಾನ ಉಂಟು.


ಅವನ ಮನೆಯಲ್ಲಿ ಸಿರಿಸಂಪತ್ತುಗಳು ಇರುವವು; ಅವನ ನೀತಿಯು ಸದಾಕಾಲವೂ ಫಲಿಸುತ್ತಿರುವುದು.


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.


ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.


ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ,


ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.


ಅಬ್ರಹಾಮನು ತನಗಿದ್ದ ಆಸ್ತಿಯನ್ನೆಲ್ಲಾ ಇಸಾಕನಿಗೆ ಕೊಟ್ಟನು.


ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು