ಆದಿಕಾಂಡ 24:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ನಾನು ಹೀಗೆ ಮನಸ್ಸಿನೊಳಗೆ ಮಾತಾಡಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವದನ್ನು ಕಂಡೆನು. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ - ನನಗೆ ನೀರನ್ನು ಕುಡಿಯುವದಕ್ಕೆ ಕೊಡಬೇಕಮ್ಮಾ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ನಾನು ನನ್ನ ಹೃದಯದಲ್ಲಿ ಹಾಗೆ ಅಂದುಕೊಂಡು ಮುಗಿಸುವುದರೊಳಗಾಗಿ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಹೊರಗೆ ಬಂದಳು. ಆಕೆಯು ಬಾವಿಯಿಂದ ನೀರನ್ನು ಸೇದಿದಳು. ಆಗ ನಾನು, ‘ನನಗೆ ಕುಡಿಯುವುದಕ್ಕೆ ಕೊಡು,’ ಎಂದು ಆಕೆಯನ್ನು ಕೇಳಿದೆನು. ಅಧ್ಯಾಯವನ್ನು ನೋಡಿ |