Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ನೀಟಾದ ದಾರಿಯಲ್ಲಿ ಕರೆದುಕೊಂಡು ಬಂದದ್ದಕ್ಕಾಗಿ ಆತನನ್ನು ಕೊಂಡಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ತಲೆಬಾಗಿ ಯೆಹೋವ ದೇವರನ್ನು ಆರಾಧಿಸಿ, ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕೆ ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರನ್ನು ಕೊಂಡಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:48
11 ತಿಳಿವುಗಳ ಹೋಲಿಕೆ  

ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.


ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.


ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು.


ನಾನು ಜ್ಞಾನಮಾರ್ಗವನ್ನು ಉಪದೇಶಿಸಿ, ಧರ್ಮಮಾರ್ಗದಲ್ಲಿ ನಿನ್ನನ್ನು ನಡೆಸುವೆನು.


ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.


ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.


ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.


ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು