ಆದಿಕಾಂಡ 24:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ, ನಂಬಿಕೆಯಿಂದಲೂ ನಡೆಯುವುದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ನನ್ನ ಪ್ರಯಾಣ ಮುಂದುವರೆಸುತ್ತೇನೆ” ಎಂದು ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಹೀಗಿರುವಲ್ಲಿ ನೀವು ನನ್ನ ದಣಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಡೆಯುವದಕ್ಕೆ ಒಪ್ಪಿದರೆ ನನಗೆ ಹೇಳಿರಿ; ಇಲ್ಲವಾದರೆ ಇಲ್ಲವೆನ್ನಿರಿ; ಆಗ ನಾನು ಬಲಗಡೆಗಾಗಲಿ ಎಡಗಡೆಗಾಗಲಿ ತಿರುಗಿಕೊಂಡು ಹೋಗುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆದ್ದರಿಂದ ನೀವು ನನ್ನ ಯಜಮಾನನಿಗೆ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ವರ್ತಿಸುವುದಾದರೆ ನನಗೆ ತಿಳಿಸಿರಿ. ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ, ಎಡಗಡೆಯಾದರೂ ತಿರುಗಿಕೊಂಡುಹೋಗುವೆನು,” ಎಂದನು. ಅಧ್ಯಾಯವನ್ನು ನೋಡಿ |