Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಅದಕ್ಕೆ ರೆಬೆಕ್ಕಳ ಅಣ್ಣ ಹಾಗು ತಾಯಿ, “ಹುಡುಗಿ ಇನ್ನೂ ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ರೆಬೆಕ್ಕಳ ಅಣ್ಣನೂ ತಾಯಿಯೂ ಅವನಿಗೆ -ಹುಡುಗಿಯು ಇನ್ನು ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಅದಕ್ಕೆ ಆಕೆಯ ಸಹೋದರನೂ, ತಾಯಿಯೂ, “ಹುಡುಗಿಯು ಕೆಲವು ದಿನ ಇರಲಿ. ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇದ್ದು ತರುವಾಯ ಹೋಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:55
5 ತಿಳಿವುಗಳ ಹೋಲಿಕೆ  

ಕೆಲವು ದಿನಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕೋಸ್ಕರ ತಿರುಗಿ ಆ ಊರಿಗೆ ಹೋಗುತ್ತಿದ್ದಾಗ ದಾರಿಯ ಸಮೀಪದಲ್ಲಿ ಬಿದ್ದಿದ್ದ ಸಿಂಹದ ಹೆಣವನ್ನು ನೋಡುವುದಕ್ಕೆ ಹೋಗಲು ಅದರ ಒಡಲಲ್ಲಿ ಜೇನುಹುಳಗಳನ್ನೂ, ಜೇನನ್ನೂ ಕಂಡು,


“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.


ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.


ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.


ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು