ಆದಿಕಾಂಡ 24:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 “ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.” ಅಧ್ಯಾಯವನ್ನು ನೋಡಿ |