ಆದಿಕಾಂಡ 24:65 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 “ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್65 ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು. ಅಧ್ಯಾಯವನ್ನು ನೋಡಿ |