Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವವಂದರೆ - ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನನದ ಪ್ರಕಾರ ಇಷ್ಮಾಯೇಲನ ಪುತ್ರರ ಹೆಸರುಗಳು ಇವೇ: ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತ್, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:13
14 ತಿಳಿವುಗಳ ಹೋಲಿಕೆ  

ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.


ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಮತ್ತು ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.


ಏಸಾವನು ಇಷ್ಮಾಯೇಲನ ಬಳಿಗೆ ಹೋಗಿ ಅಬ್ರಹಾಮನ ಮಗನೂ ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತಳನ್ನು ಮದುವೆ ಮಾಡಿಕೊಂಡನು.


“ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು