Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ನಲವತ್ತು ವರ್ಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳೂ ಅರಾಮ್ಯನಾದ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಪದ್ದನ್ ಅರಾಮಿನಿಂದ ಕರೆದುತಂದು ಹೆಂಡತಿಯನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಸಾಕನು ನಾಲ್ವತ್ತು ವರುಷದವನಾದಾಗ ಅರಾಮ್ಯನಾದ ಬೆತೂವೇಲನ ಮಗಳಾಗಿಯೂ ಅರಾಮ್ಯನಾದ ಲಾಬಾನನ ತಂಗಿಯಾಗಿಯೂ ಇದ್ದ ರೆಬೆಕ್ಕಳನ್ನು ಪದ್ದನ್ ಅರಾವಿುನಿಂದ ತರಿಸಿ ಹೆಂಡತಿಯಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:20
18 ತಿಳಿವುಗಳ ಹೋಲಿಕೆ  

ರೆಬೆಕ್ಕಳಿಗೆ ಲಾಬಾನನೆಂಬ ಅಣ್ಣನಿದ್ದನು. ಅವನು ಬುಗ್ಗೆಯ ಹತ್ತಿರ ಒಂಟೆಗಳ ಬಳಿಯಲ್ಲಿ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.


ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.


ಬೆತೂವೇಲನು ರೆಬೆಕ್ಕಳನ್ನು ಪಡೆದನು. ಈ ಎಂಟು ಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಂದ ಪಡೆದಳು.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.


ಆದರೆ ಯಾಕೋಬನು ತಾನು ಹೋಗುತ್ತೇನೆಂದು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ಅವನನ್ನು ಮೋಸಗೊಳಿಸಿ ಹೊರಟುಬಿಟ್ಟನು.


ತಾನು ಸಂಪಾದಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಪದ್ದನ್ ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಪ್ರಾಣಿಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವುದಕ್ಕಾಗಿ ಹೊರಟನು.


ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಪುನಃ ಅವನಿಗೆ ದರ್ಶನ ಕೊಟ್ಟು ಅವನನ್ನು ಆಶೀರ್ವದಿಸಿದನು.


ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.


ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.


ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ.


ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.


ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸುರಕ್ಷಿತವಾಗಿ ಸೇರಿದನು. ಆ ಊರಿನ ಬಳಿಯಲ್ಲಿ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ಲೇಯಳ ದಾಸಿಯಾದ ಜಿಲ್ಪಳಲ್ಲಿ ಹುಟ್ಟಿದವರು: ಗಾದ್, ಆಶೇರ್. ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು ಇವರೇ.


ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ಆದುದರಿಂದ ಮಗನೇ, ನನ್ನ ಮಾತಿಗೆ ವಿಧೇಯನಾಗು; ನೀನು ಎದ್ದು ಹಾರಾನಿನಲ್ಲಿರುವ ನನ್ನ ಅಣ್ಣನಾದ ಲಾಬಾನನ ಬಳಿಗೆ ಹೊರಟುಹೋಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು