ಆದಿಕಾಂಡ 25:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.” ಅಧ್ಯಾಯವನ್ನು ನೋಡಿ |