Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಸಾಕನಿಗೆ ಬೇಟೆಯ ಮಾಂಸ ಇಷ್ಟ; ಎಂದೇ ಏಸಾವನ ಮೇಲೆ ಹೆಚ್ಚು ಪ್ರೀತಿ. ರೆಬೆಕ್ಕಳಿಗಾದರೋ ಯಕೋಬನ ಮೇಲೆ ಹೆಚ್ಚು ಪ್ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದದರಿಂದ ಅವನು ಏಸಾವನನ್ನು ಪ್ರೀತಿಸಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಬೇಟೆಯಲ್ಲಿ ಆಸಕ್ತನಾಗಿದ್ದ ಇಸಾಕನು ಏಸಾವನನ್ನು ಪ್ರೀತಿಸಿದನು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:28
8 ತಿಳಿವುಗಳ ಹೋಲಿಕೆ  

ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,


ಅವನೂ ಸವಿಯೂಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು ಅವನಿಗೆ, “ಅಪ್ಪಾ, ನೀನು ಎದ್ದು ನಿನ್ನ ಮಗನಾದ ನಾನು ಬೇಟೆಯಿಂದ ತಂದಿರುವ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಿದನು.


ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.


ಇಸಾಕನು, “ಆ ಪದಾರ್ಥವನ್ನು ಹತ್ತಿರಕ್ಕೆ ತೆಗೆದುಕೊಂಡು ಬಾ; ನೀನು ತಂದ ಬೇಟೆ ಮಾಂಸವನ್ನು ನಾನು ಊಟಮಾಡಿದ ಮೇಲೆ ನಿನ್ನನ್ನು ಆಶೀರ್ವದಿಸುವೆನು” ಎಂದು ಹೇಳಿದನು. ಯಾಕೋಬನು ಅದನ್ನು ಅವನ ಹತ್ತಿರಕ್ಕೆ ತೆಗೆದುಕೊಂಡು ಬರಲು ಅವನು ತಿಂದನು; ದ್ರಾಕ್ಷಾರಸವನ್ನು ಕುಡಿದನು.


ಆಡಿನ ಹಿಂಡಿನೊಳಗೆ ಹೋಗಿ ಎರಡು ಒಳ್ಳೆ ಆಡಿನ ಮರಿಗಳನ್ನು ಬೇಗ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನಾನೇ ಸಿದ್ಧಮಾಡುತ್ತೇನೆ.


ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು


ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು