Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಯಕೋಬ, ‘ನಿನ್ನದಾಗಿರುವ ಜ್ಯೇಷ್ಠಪುತ್ರನ ಹಕ್ಕನ್ನು ನನಗೆ ಮೊದಲು ಮಾರಿಬಿಡು,’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯಾಕೋಬನು ಅವನಿಗೆ - ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿಬಿಡು ಅನ್ನಲು ಏಸಾವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:31
9 ತಿಳಿವುಗಳ ಹೋಲಿಕೆ  

ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.


ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.


ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು,


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು