ಆದಿಕಾಂಡ 26:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಮಾಡಬಹುದೆ? ನಮ್ಮಲ್ಲಿ ಯಾರಾದರೊಬ್ಬನು ನಿನ್ನ ಹೆಂಡತಿಯನ್ನು ಕೂಡಿರಬಹುದಿತ್ತಲ್ಲವೆ? ಆಗ ನಿನ್ನಿಂದ ನನಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲವೆ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದಕ್ಕೆ ಅಬೀಮೆಲೆಕನು - ನೀನು ನಮಗೆ ಹೀಗೆ ಯಾಕೆ ಮಾಡಿದಿ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಕೂಡುವದಕ್ಕೆ ಆಸ್ಪದವಾಗಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ ಎಂದು ಹೇಳಿ ತನ್ನ ಪ್ರಜೆಗಳಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು. ಅಧ್ಯಾಯವನ್ನು ನೋಡಿ |