Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:18
10 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.


ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.


ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,


ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.


ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.


ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.


ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು