Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಇಸಾಕನು ಅವರನ್ನು ಸಾಗಕಳುಹಿಸಲು ಅವರು ಸಮಾಧಾನದೊಡನೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಅನಂತರ ಇಸಾಕನು ಅವರನ್ನು ಸಾಗಕಳುಹಿಸಿದನು. ಅವರು ಸಮಾಧಾನದಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:31
16 ತಿಳಿವುಗಳ ಹೋಲಿಕೆ  

ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.


ಆದುದರಿಂದ ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ಆಗ ಯಾಕೋಬನು ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.


ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.


ಅದರಂತೆ ಮುಂಜಾನೆಯೇ ಎದ್ದು ಅಬ್ರಹಾಮನು ಕತ್ತೆಗೆ ತಡಿ ಹಾಕಿಸಿ, ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡೆಸಿ ಅದನ್ನು ತೆಗೆದುಕೊಂಡು ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಆದುದರಿಂದ ನೀನು ನನಗೂ, ನನ್ನ ಮಕ್ಕಳಿಗೂ, ನನ್ನ ಸಂತತಿಗೂ ಅನ್ಯಾಯ ಮಾಡದೆ, ನಾನು ನಿನಗೆ ಹಿತವನ್ನು ಮಾಡಿದಂತೆಯೇ, ನನಗೂ, ನೀನು ವಾಸಿಸುವ ಈ ದೇಶಕ್ಕೂ ಹಿತವನ್ನು ಮಾಡುವುದಾಗಿ ದೇವರ ಮೇಲೆ ಪ್ರಮಾಣ ಮಾಡಬೇಕು” ಎಂದು ಹೇಳಿದನು.


ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು


ಅಬ್ರಾಮನು, ಸೊದೋಮಿನ ಅರಸನಿಗೆ,


ಆ ನಂತರ ಅಬ್ರಹಾಮನು ಕುರಿದನಗಳನ್ನು ಅಬೀಮೆಲೆಕನಿಗೆ ದಾನ ಮಾಡಿದನು.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು