Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಸಂತತಿಯವರನ್ನು ಆಕಾಶದಲ್ಲಿರುವ ನಕ್ಷತ್ರಗಳಷ್ಟಾಗಿ ಮಾಡಿ ಅವರಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನೇ ಇದನ್ನು ನೆರವೇರಿಸುವೆನು; ಯಾಕೆಂದರೆ ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತುಗಳಿಗೆ ವಿಧೇಯನಾಗಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞೆಗಳನ್ನು, ಕಟ್ಟಳೆಗಳನ್ನು, ನಿಯಮಗಳನ್ನು ಕೈಕೊಂಡು ನಡೆದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:5
14 ತಿಳಿವುಗಳ ಹೋಲಿಕೆ  

ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.


“ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೆ ಹಿಂದೆಗೆಯದೆ ಹೋದುದರಿಂದ, ಯೆಹೋವನಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.


ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.


ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.


ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು