ಆದಿಕಾಂಡ 26:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕೂಡಲೆ ಅವನು ಇಸಾಕನನ್ನು ಕರೆಯಿಸಿ, “ಖಂಡಿತವಾಗಿ ಈಕೆ ನಿನ್ನ ಹೆಂಡತಿ; ಮತ್ತೆ ಆಕೆ ನಿನ್ನ ತಂಗಿ ಎಂದು ಏಕೆ ಹೇಳಿದೆ?” ಎಂದು ಕೇಳಿದನು. ಇಸಾಕನು, “ಈಕೆಯ ನಿಮಿತ್ತ ಜನರು ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಅವನು ಇಸಾಕನನ್ನು ಕರೆಸಿ - ನಿಶ್ಚಯವಾಗಿ ಈಕೆಯು ನಿನ್ನ ಹೆಂಡತಿಯಲ್ಲವೇ, ತಂಗಿ ಅಂತ ಯಾಕೆ ಹೇಳಿದಿ ಎಂದು ಕೇಳಲು ಇಸಾಕನು - ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಬೀಮೆಲೆಕನು ಇಸಾಕನನ್ನು ಕರೆದು, “ಈ ಸ್ತ್ರೀಯು ನಿನ್ನ ಹೆಂಡತಿ. ಅವಳು ನಿನ್ನ ತಂಗಿಯೆಂದು ಯಾಕೆ ನಮಗೆ ಹೇಳಿದೆ?” ಎಂದು ಕೇಳಿದನು. ಇಸಾಕನು ಅವನಿಗೆ, “ನೀನು ಆಕೆಯನ್ನು ತೆಗೆದುಕೊಳ್ಳಲು ನನ್ನನ್ನು ಕೊಲ್ಲಬಹುದೆಂಬ ಭಯದಿಂದ ಹಾಗೆ ಹೇಳಿದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅಬೀಮೆಲೆಕನು ಇಸಾಕನನ್ನು ಕರೆದು, “ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು, ‘ಆಕೆಯು ನನ್ನ ತಂಗಿ,’ ಎಂದು ಏಕೆ ಹೇಳಿದೆ?” ಎಂದನು. ಇಸಾಕನು ಅವನಿಗೆ, “ನಾನು ಆಕೆಯ ನಿಮಿತ್ತ ಸಾಯಬಾರದೆಂದು ಹಾಗೆ ಹೇಳಿದೆನು,” ಎಂದನು. ಅಧ್ಯಾಯವನ್ನು ನೋಡಿ |