ಆದಿಕಾಂಡ 27:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯಕೋಬನು, “ನಾನೇ ನಿಮ್ಮ ಹಿರಿಯ ಮಗ ಏಸಾವನು; ನಿಮ್ಮ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕುಳಿತುಕೊಂಡು ನಾನು ತಂದಿರುವ ಬೇಟೆಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯಾಕೋಬನು ಅವನಿಗೆ - ನಾನು ನಿನ್ನ ಹಿರೀ ಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕೂತುಕೊಂಡು ನಾನು ತಂದಿರುವ ಬೇಟೇ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಲು ಇಸಾಕನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯಾಕೋಬನು ತನ್ನ ತಂದೆಗೆ, “ನಾನು ನಿನ್ನ ಹಿರಿಯ ಮಗ ಏಸಾವನು. ನೀನು ನನಗೆ ಹೇಳಿದಂತೆ ಮಾಡಿದ್ದೇನೆ, ಎದ್ದು ಕುಳಿತುಕೋ. ನೀನು ನನ್ನನ್ನು ಆಶೀರ್ವದಿಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು. ಅಧ್ಯಾಯವನ್ನು ನೋಡಿ |