Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಸಾಕನು ಅವನಿಗೆ, “ನಾನು ಮುದುಕನಾಗಿದ್ದೇನೆ; ಯಾವಾಗ ಸಾಯುವೆನೋ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇಸಾಕನು ಅವನಿಗೆ, “ನೋಡು, ನಾನು ಮುದುಕನಾಗಿಬಿಟ್ಟೆ. ಯಾವಾಗ ಸಾಯುತ್ತೇನೋ ಗೊತ್ತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸಾಕನು ಅವನಿಗೆ - ನಾನು ಮುದುಕನಾದೆನಷ್ಟೆ; ಯಾವಾಗ ಸಾಯುವೆನೋ ಗೊತ್ತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇಸಾಕನು ಅವನಿಗೆ, “ನನಗೆ ವಯಸ್ಸಾಯಿತು. ನಾನು ಬಹುಬೇಗನೆ ಸಾಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಇಸಾಕನು, “ಇಗೋ, ಈಗ ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:2
10 ತಿಳಿವುಗಳ ಹೋಲಿಕೆ  

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.


“ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.


ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ.


ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು