Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಇಸಾಕನು ಅವನಿಗೆ, “ಮಗನೇ, ಹತ್ತಿರಕ್ಕೆ ಬಾ; ನೀನು ನನ್ನ ಮಗನೋ ಅಲ್ಲವೋ, ಎಂದು ಮುಟ್ಟಿ ತಿಳಿದುಕೊಳ್ಳಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳುಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಲ್ಲೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಇಸಾಕನು ಯಾಕೋಬನಿಗೆ, “ನನ್ನ ಮಗನೇ, ನೀನೇ ನನ್ನ ಮಗ ಏಸಾವನು ಹೌದೋ, ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿನೋಡುವಂತೆ ಹತ್ತಿರ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:21
5 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ಒಂದು ವೇಳೆ ತಂದೆಯು ನನ್ನನ್ನು ಮುಟ್ಟಿ ನೋಡಿದರೆ ನಾನು ಅವನಿಗೆ ಮೋಸ ಮಾಡುವವನಾಗಿ ಕಂಡು ಬಂದರೆ, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು” ಎಂದನು.


ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು