ಆದಿಕಾಂಡ 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯಾಕೋಬನು ತನ್ನ ತಂದೆಯ ಹತ್ತಿರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಾಕೋಬನ ಸ್ವರವಾಗಿದೆ, ಕೈಗಳು ಏಸಾವನ ಕೈಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯಕೋಬನು ಹತ್ತಿರಕ್ಕೆ ಬಂದಾಗ ತಂದೆ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಕೋಬನ ಸ್ವರ; ಆದರೆ ಕೈ ಏಸಾವನ ಕೈ,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯಾಕೋಬನು ತನ್ನ ತಂದೆಯ ಹತ್ತರಕ್ಕೆ ಬಂದಾಗ ಇಸಾಕನು ಅವನನ್ನು ಮುಟ್ಟಿ ನೋಡಿ - ಸ್ವರವೇನೋ ಯಾಕೋಬನ ಸ್ವರ, ಕೈ ಏಸಾವನ ಕೈ ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೋದನು. ಇಸಾಕನು ಅವನನ್ನು ಮುಟ್ಟಿ, “ನಿನ್ನ ಸ್ವರ ಯಾಕೋಬನ ಸ್ವರವಿದ್ದಂತಿದೆ. ಆದರೆ ನಿನ್ನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿವೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಯಾಕೋಬನು ತನ್ನ ತಂದೆ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ, “ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |